ಐಪಿಎಲ್ ನ ಅತ್ಯಂತ ಯಶಸ್ವಿ ನಾಯಕರಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಹೇಂದ್ರ ಸಿಂಗ್ ಧೋನಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರ ಹೆಸರಿನಲ್ಲಿದ್ದ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಮುರಿದಿದ್ದಾರೆ.
ಅಬುಧಾಬಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಧೋನಿ ವೆಂಕಟೇಶ್ ಅಯ್ಯರ್ ಮತ್ತು ದಿನೇಶ್ ಕಾರ್ತಿಕ್ ಅವರ ಕ್ಯಾಚ್ ಪಡೆದರು. ಈ ಮೂಲಕ ಐಪಿಎಲ್ ನಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದಿದ್ದ ದಿನೇಶ್ ಕಾರ್ತಿಕ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಧೋನಿ ಮುರಿದರು.
ಧೋನಿ ಐಪಿಎಲ್ ನಲ್ಲಿ 116 ಕ್ಯಾಚ್ ಪಡೆದು ಅತೀ ಹೆಚ್ಚು ಕ್ಯಾಚ್ ಹಿಡಿದ ವಿಕೆಟ್ ಕೀಪರ್ ಎನಿಸಿಕೊಂಡಿದ್ದರೆ, ದಿನೇಶ್ ಕಾರ್ತಿಕ್ 115 ಕ್ಯಾಚ್ ಪಡೆದು ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಆದರೆ ಒಟ್ಟಾರೆ 116 ಕ್ಯಾಚ್ ಮತ್ತು 39 ಸ್ಟಂಪಿಂಗ್ ಸೇರಿದಂತೆ ಒಟ್ಟಾರೆ 155 ಬಲಿ ಪಡೆದು ಅತೀ ಹೆಚ್ಚು ಬಲಿ ಪಡೆದ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ದಿನೇಶ್ ಕಾರ್ತಿಕ್ 115 ಕ್ಯಾಚ್ ಮತ್ತು 31 ಸ್ಟಂಪಿಂಗ್ ಸೇರಿದಂತೆ 146 ವಿಕೆಟ್ ಪಡೆದು 2ನೇ ಸ್ಥಾನದಲ್ಲಿದ್ದಾರೆ.