ಹಿರಿಯ ಐಪಿಎಸ್ ಅಧಿಕಾರಿ ಡಿಜಿಪಿ ರವೀಂದ್ರನಾಥ್( RAVINDRANATH) ರಾಜಿನಾಮೆ ವಿಚಾರ ಕುರಿತಂತೆ ಹೊನ್ನಾಳಿಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ(RENUKACHARYA) ಪ್ರತಿಕ್ರಿಯೆ ನೀಡಿದ್ದಾರೆ.
![](https://rajnewskannada.in/wp-content/uploads/2022/05/renu.png)
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(D.K.SHIVKUMAR) ಹೇಳಿಕೆಗೆ ಎಂ.ಪಿ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಡಿ. ಕೆ. ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯುತ್ತಾರೆ. ಡಾ ರವೀಂದ್ರನಾಥ್ ಅವರ ರಾಜೀನಾಮೆಗೆ ನಾನು ಕಾರಣ ಅಲ್ಲ. ನಾನು ಯಾವುದೇ ನಕಲಿ ಜಾತಿ ಪ್ರಮಾಣಪತ್ರ ಪಡೆದಿಲ್ಲ. ಡಿಕೆ ಶಿವಕುಮಾರ್ ವಿನಾಕಾರಣ ನನ್ನ ಮೇಲೆ ಆರೋಪ ಮಾಡುವುದನ್ನು ಬಿಡಬೇಕು. ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಜನರೆ ಅದಕ್ಕೆ ಉತ್ತರ ನೀಡಿದ್ದಾರೆ. ಬಿಜೆಪಿ ಸಚಿವರ ಮೇಲೆ ಡಿಕೆ ಶಿವಕುಮಾರ್ ಅವರು ನಿರಂತರ ಆರೋಪ ಮಾಡುತ್ತಾ ಬರುತ್ತಿದ್ದಾರೆ. ಇದನ್ನೂ ಓದಿ : – ರೈಲುಗಳಲ್ಲಿ ಮಕ್ಕಳಿಗಾಗಿ ‘ಬೇಬಿ ಬರ್ತ್’ – ಪ್ರಯಾಣಿಕರು ಫುಲ್ ಖುಷ್
![](https://rajnewskannada.in/wp-content/uploads/2022/05/renu-1.png)
ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ನಡುವೆ ಸಿಎಂ ಆಗಬೇಕೆಂಬ ಶೀತಲ ಸಮರ ನಡೆಯುತ್ತಿದೆ. ಮುಖ್ಯಮಂತ್ರಿ ಆಗುತ್ತೇನೆಂದು ಡಿಕೆ ಶಿವಕುಮಾರ್ ಅವರು ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಎಬಿಸಿಡಿ ಎಂಬ ಗುಂಪುಗಳಿವೆ. ಆದರೆ ಬಿಜೆಪಿಯಲ್ಲಿ ಯಾವುದೇ ಗುಂಪು ಗಳಿಲ್ಲ. 2023 ಚುನಾವಣೆಯಲ್ಲಿ ನಾವೆಲ್ಲ ಒಟ್ಟಾಗಿ ಹೋಗುತ್ತೇವೆ. ಕಾಂಗ್ರೆಸ್ ಮುಳುಗುವ ಹಡಗಿಗೆ ಡಿಕೆ ಶಿವಕುಮಾರ್ ಕ್ಯಾಪ್ಟನ್ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ : – ಬೆಂಗಳೂರಿನಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ