ಲವ್ ಯೂ ರಚ್ಚು ಚಿತ್ರೀಕರಣ ದುರಂತ ಪ್ರಕರಣದಲ್ಲಿ ನಿರ್ದೇಶಕ ಸೇರಿದಂತೆ ಮೂವರಿಗೆ 14 ದಿನಗಳವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರಾಮನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಅನುಪಮ ಲಕ್ಷ್ಮೀ ಚಿತ್ರತಂಡದ ಮೂವರಿಗೆ ನ್ಯಾಯಾಂಗ ಬಂಧನ ಆದೇಶ ನೀಡಿದ್ದಾರೆ.
ನಿರ್ದೇಶಕ ಶಂಕರ್. ಕ್ರೇನ್ ಚಾಲಕ ಮಹದೇವ್, ಫೈಟ್ ಮಾಸ್ಟರ್ ವಿನೋದ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರಾಮನಗರದ ಬಳಿ ಚಿತ್ರೀಕರಣದ ವೇಳೆ ಹೈ ಟೆನ್ಷನ್ ವಯರ್ ತಗುಲಿ ಸಾಹಸ ಕಲಾವಿದ ವಿವೇಕ್ ಮೃತಪಟ್ಟರೆ, ಮತ್ತೊಬ್ಬ ಕಲಾವಿದ ಗಂಭೀರವಾಗಿ ಗಾಯಗೊಂಡು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳದೇ ಚಿತ್ರ ತಂಡದ ತಪ್ಪು ಕಂಡು ಬಂದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ.