ಧಾರವಾಡ (Dharwad) ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರ (Constituent assembly) ದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿಗೆ ಟಿಕೆಟ್ ನೀಡಬಾರದೆಂದು ಬಹಿರಂಗವಾಗಿ ಟಿಕೆಟ್ (Ticket) ಆಕಾಂಕ್ಷಿಗಳು ಅಸಮಾಧಾನ ಹೊರಹಾಕಿದ್ದಾರೆ. ಟಿಕೆಟ್ ಗಾಗಿ ಬರೋಬ್ಬರಿ 15 ಜನರು ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಶಾಸಕಿ ಇದ್ದರೂ ಕೈ ಟಿಕೆಟ್ ಗಾಗಿ ಬಿಗ್ ಫೈಟ್ ನಡೆದಿದೆ. ಟಿಕೆಟ್ ಗಾಗಿ ಶಾಸಕಿ ಕುಸುಮಾವತಿ ಶಿವಳ್ಳಿ, ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ, ದೊಡ್ಡಪ್ಪಗೌಡ ಪಾಟೀಲ್, ಗುರುರಾಜ್ ದೊಡ್ಡಮನಿ, ಶಿವಾನಂದ ಬೆಂತೂರ, ಜಗನ್ನಾಥ ಸಿದ್ದನಗೌಡರ ನಡುವೆ ಬಿಗ್ ಫೈಟ್ ನಡೆದಿದೆ.
ಯಾವುದೇ ಕಾರಣಕ್ಕೂ ಶಾಸಕಿ ಕುಸುಮಾವತಿ ಶಿವಳ್ಳಿಗೆ ಟಿಕೆಟ್ ನೀಡಲೇಬಾರದೆಂದು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಕುಸುಮಾವತಿ ಶಿವಳ್ಳಿಗೆ ಹೈಕಮಾಂಡ್ (High command) ಟಿಕೆಟ್ ನೀಡಿದ್ರೆ ನಾವೆಲ್ಲಾ ವಿರೋಧ ಮಾಡುತ್ತೇವೆಂದು ಉಳಿದ ಟಿಕೆಟ್ ಆಕಾಂಕ್ಷಿಗಳು ಹೇಳುತ್ತಿದ್ದಾರೆ. ಕುಸುಮಾವತಿ ಶಿವಳ್ಳಿ 2019 ರಿಂದ ಶಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಶಾಸಕಿಯಾಗಿ ಆಯ್ಕೆಯಾದ ನಂತರ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿಲ್ಲ. ಕ್ಷೇತ್ರದ ಅಭಿವೃದ್ಧಿ ಕಡೆ ಗಮನ ಹರಿಸಿಲ್ಲ. ಕ್ಷೇತ್ರದಲ್ಲಿ ಏನೂ ಪಕ್ಷ ಸಂಘಟನೆ ಮಾಡದೆ ಟಿಕೆಟ್ ಕೇಳುವುದು ಯಾವ ನ್ಯಾಯ ಎಂಬ ಪ್ರಶ್ನೆ ಎದುರಾಗಿದೆ. ಶಾಸಕಿ ಕುಸುಮಾವತಿ ಶಿವಳ್ಳಿ ವಿರುದ್ಧ ಕ್ಷೇತ್ರದಲ್ಲಿ ವಿರೋಧಿ ಅಲೆ ಇದೆ. ಹೀಗಿರುವಾಗ ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದ್ರೆ ಇಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಕಾರಣವಾಗುತ್ತದೆ. ಸರಿಯಾದ ಅಭ್ಯರ್ಥಿಯನ್ನ ಆಯ್ಕೆ ಮಾಡಿ ಟಿಕೆಟ್ ನೀಡಿ. ನಾವೆಲ್ಲರೂ ಒಂದಾಗಿ ಚುನಾವಣೆ ಎದುರಿಸಿ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸಲು ಶ್ರಮವಹಿಸುತ್ತೇವೆ. ಇದನ್ನು ಓದಿ : – ಮಲೇಷ್ಯಾದಲ್ಲಿ ಭೂಕುಸಿತ – 8 ಮಂದಿ ಬಲಿ – 50ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ
ಆದ್ರೆ ಶಾಸಕಿ ಕುಸುಮಾವತಿ ಶಿವಳ್ಳಿಗೆ ಟಿಕೆಟ್ ನೀಡಿದ್ರೆ ನಾವೆಲ್ಲರೂ ವಿರೋಧ ಮಾಡುತ್ತೇವೆ ಎಂದು ಟಿಕೆಟ್ ಆಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಈಗಾಗಲೇ ಪಕ್ಷದ ಹೈಕಮಾಂಡ್ ಗೆ ಕೈ ಪಡೆಯ ಮುಖಂಡರು ದೂರು ನೀಡಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪಕ್ಷದ ಸಭೆಯಲ್ಲಿಯೂ ಟಿಕೆಟ್ ಆಕಾಂಕ್ಷಿಗಳು ಅಸಮಾಧಾನ ತೋಡಿಕೊಂಡಿದ್ದರು. ಹೀಗಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕುಂದಗೋಳ ಕ್ಷೇತ್ರದ ಟಿಕೆಟ್ ಹಂಚಿಕೆ ತಲೆನೋವಾಗಿ ಪರಿಣಮಿಸಿದೆ.
ಇದನ್ನು ಓದಿ : – ಇಂದು ಮಾಜಿ ಸಿಎಂ ಹೆಚ್ಡಿಕೆ ಹುಟ್ಟುಹಬ್ಬ – ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣಮಹೋತ್ಸವ