ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
![](https://rajnewskannada.in/wp-content/uploads/2022/05/01-9.png)
ಬೆಂಗಳೂರಿನಲ್ಲಿ ಮಾತನಾಡಿದ ಅವರು ಅವರಿಗೆ ಏನೇನು ನಂಬಿಕೆ ಇದೆಯೋ ? ಏನು ಬೇಕಾದ್ರೂ ಮಾಡಿಕೊಳ್ಳಲಿ. ನಾವು ಮಧ್ಯಪ್ರವೇಶ ಮಾಡಲ್ಲ. ಅವರು ಈ ರಾಜ್ಯವನ್ನ ಸಾಯಿಸ್ತಿದ್ದಾರೆ ಎಂದು ಡಿಕೆಶಿ ಕಿಡಿಕಾರಿದ್ದಾರೆ. ಅವರ ಸ್ವಂತಕ್ಕೆ ಮನೆಗೆ ಏನ್ ಬೇಕಾದ್ರೂ ಮಾಡಲಿ. ಇದನ್ನೂ ಓದಿ :- ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ?
![](https://rajnewskannada.in/wp-content/uploads/2022/05/image-13-1024x683.png)
ಸರ್ಕಾರ ಇದೆ, ಅಲ್ಪಸಂಖ್ಯಾತ ಇಲಾಖೆ ಇದೆ, ಮುಜರಾಯಿ ಇಲಾಖೆಯೂ ಇದೆ, ಕ್ಯಾಬಿನೆಟ್ ಇದೆ, ಸರ್ಕಾರಿ ಅಧಿಕಾರಿಗಳು ಇದ್ದಾರೆ. ಆದ್ರೆ ಖಾಸಗಿಯಾಗಿ ಹೀಗೆ ಮಾಡಬಾರದು, ಅವರ ವಿರುದ್ಧ ಕೇಸ್ ಹಾಕಬೇಕು ಎಂದು ಮಂಗಳೂರು ತಾಂಬೂಲ ಪ್ರಶ್ನೆ ವಿರುದ್ಧ ಡಿಕೆಶಿ ಕಿಡಿಕಾರಿದ್ರು. ಇದೊಂದು ಭಾವನಾತ್ಮಕ ವಿಚಾರ. ಅದನ್ನ ಅವರು ಮನೆಯಲ್ಲಿ ಇಟ್ಟುಕೊಳ್ಳಲಿ. ಸರಕಾರ ಮಧ್ಯಪ್ರವೇಶ ಮಾಡಿ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ, ಎಸ್ಪಿ ಮಧ್ಯಪ್ರವೇಶ ಮಾಡ್ಬೇಕು ಎಂದು ಡಿ.ಕೆ ಶಿವಕುಮಾರ್ ಆಗ್ರಹಿಸಿದ್ರು.
ಇದನ್ನೂ ಓದಿ :- ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ?