ವಿಜಯಪುರ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬರಗಾಲ, ಪ್ರವಾಹ, ಕೋವಿಡ್ ಪರಿಸ್ಥಿತಿಯನ್ನು ಅತ್ಯಂತ ಕ್ರಿಯಾಶೀಲತೆಯಿಂದ ನಿಭಾಯಿಸಿದ್ದಾರೆ. ಸಮರ್ಪಕವಾಗಿ ಆಡಳಿತ ನಡೆಸಿದ್ದರಿಂದ ಅವರೇ ಮುಂದುವರಿಯುತ್ತಾರೆ. ಸಿಎಂ ಬದಲಾವಣೆ ವಿಚಾರ ಊಹಾಪೋಹ ಅಷ್ಟ. ಅದಕ್ಕೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದರು.
ಅನೇಕರು ತಮಗೆ ಅನಿಸಿದ್ದನ್ನು ಹೇಳಿರುತ್ತಾರೆ. ಇದೆಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದೆ. ಸಮರ್ಪಕ ಉತ್ತರಗಳನ್ನು ಹೈಕಮಾಂಡ್ ಕೊಡುತ್ತದೆ. ಯಡಿಯೂರಪ್ಪ ನೇತೃತ್ವದಲ್ಲಿ ಎಲ್ಲ ಸಚಿವರು ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.