ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಹಾಕಿದ ಸವಾಲು ಏನು ಗೊತ್ತಾ…?

ಸಿಎಂ ಬಸವರಾಜ್ ಬೊಮ್ಮಾಯಿ ( basavaraj bommai ) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ( b.s yediurapp ) ವಿರುದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ( basavaraj bommai ) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ( b.s yediurappa ) ವಿರುದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ನನ್ನ ಎರಡೇ ಎರಡು ಸವಾಲು..ನೀಡುತ್ತೇನೆ ಎಂದು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.


ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ನನ್ನ ಎರಡೇ ಎರಡು ಸವಾಲು.. 1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. 2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ಸವಾಲು ಹಾಕಿದ್ದಾರೆ.


ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿ.ಎಸ್ ಯಡಿಯೂರಪ್ಪ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.


ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಬಿ.ಎಸ್ ಯಡಿಯೂರಪ್ಪ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು ಎಂದು ಕಿಡಿಕಾರಿದ್ದಾರೆ.


ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬೊಮ್ಮಾಯಿ ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ :- ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್.ಟಿ ಬೊಮ್ಮಣ್ಣ ನಿಧನ


ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಬಿ.ಎಸ್ ಯಡಿಯೂರಪ್ಪ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ. ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ಸವಾಲು ಹಾಕಿದ್ದಾರೆ.


ಪಾಪ, @BSYBJP ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು.


ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ @BJP4India ಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಟ್ವೀಟ್ ಮೂಲಕ ತಿವಿದಿದ್ದಾರೆ.

ಇದನ್ನೂ ಓದಿ :- Canara Bank- 1,29,000 ಕೋಟಿ ಸಾಲ ವಸೂಲು ಮಾಡಲಾಗದ ಕೆನರಾ ಬ್ಯಾಂಕ್, ಸುಸ್ತಿದಾರರ ಹೆಸರು ಬಹಿರಂಗಪಡಿಸಿಲ್ಲ ಯಾಕೆ..?

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!