ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಸಿ ರಾಜ್ಯ ಸರಕಾರ ಶಾಕ್ ನೀಡಿದೆ.
ಏಪ್ರಿಲ್ 1ರಿಂದಲೇ ಜಾರಿಗೆ ಬರುವಂತೆ ಪ್ರತೀ ಯೂನಿಟ್ ಗೆ 30 ಪೈಸೆ ಏರಿಕೆ ಮಾಡಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗ ಬುಧವಾರ ಆದೇಶ ಹೊರಡಿಸಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ಶಿಫಾರಸಿಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಇದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಬರೆ ಎಳೆಯಲಾಗಿದೆ.