ಪದ್ಮಶ್ರೀ ಪುರಸ್ಕೃತ ಹಾಗೂ ಭಾರತೀಯ ವೈದ್ಯಕೀಯ ಮಂಡಳಿ ಮಾಜಿ ಅಧ್ಯಕ್ಷ ಡಾ. ಕೆ.ಕೆ. ಅಗರ್ ವಾಲ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೊರೊನಾ ವಿರುದ್ಧ ಸುದೀರ್ಘ ಹೋರಾಟ ನಡೆಸಿದ್ದ ಅಗರ್ ವಾಲ್, ಸೋಮವಾರ ರಾತ್ರಿ 11.30ರ ಸುಮಾರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅಗರ್ ವಾಲ್ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದರು ಎಂದು ವೈದ್ಯರು ಹೇಳಿಕೆಯಲ್ಲಿ ತಿಳಿಸಿದ್ದಾರೆ.