ಬೆಂಗಳೂರು: ವರನಟ ಡಾ. ರಾಜ್ಕುಮಾರ್ ಅವರಿಗೆ ಯೋಗ ಹೇಳಿಕೊಡುತ್ತಿದ್ದ ಯೋಗ ಗುರು ಹೊನ್ನಪ್ಪ ಫಕೀರಪ್ಪ ನಾಯ್ಕರ್ (90 ವರ್ಷ) ಅವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
90 ವರ್ಷದ ಹೊನ್ನಪ್ಪ ಫಕೀರಪ್ಪ ನಾಯ್ಕರ್ ಅವರಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕಾಗಿತ್ತು. ಅವರಿಗೆ ಚಿಕಿತ್ಸೆ ಕೊಡಿಸಿದರೂ ಅದು ಫಲಕಾರಿಯಾಗದೆ ಇಂದು ಅವರು ಸಾವನ್ನಪ್ಪಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೊನ್ನಪ್ಪ ನಾಯ್ಕರ್ ನಂತರ ಯೋಗದತ್ತ ಮುಖ ಮಾಡಿದರು. ವರನಟ ಡಾ. ರಾಜಕುಮಾರ್ ಅವರ ಕುಟುಂಬ ಸೇರಿದಂತೆ ಹಲವು ಗಣ್ಯರಿಗೆ ಯೋಗ ಹೇಳಿಕೊಡುತ್ತಿದ್ದರು