ಬೆಂಗಳೂರು: ಜೂನ್ 21ಕ್ಕೆ ನಡೆಸಲು ಉದ್ದೇಶಿಸಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಕೊರೊನಾ ಸೋಂಕಿನ 2ನೇ ಅಲೆಯ ಕಾರಣದಿಂದಾಗಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.