Breaking News; ಎಸ್​ಎಸ್​​ಎಲ್​​​ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಜೂನ್‌ 21ಕ್ಕೆ ನಡೆಸಲು ಉದ್ದೇಶಿಸಿದ್ದ ಎಸ್​​ಎಸ್​​​ಎಲ್​​ಸಿ ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ಕೊರೊನಾ ಸೋಂಕಿನ 2ನೇ ಅಲೆಯ ಕಾರಣದಿಂದಾಗಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!