ವಿಜಯಪುರ : ಒಂದೇ ದಿನ ತಾಯಿ ಹಾಗೂ ಮಗ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ತಾಯಿ ನಿಂಗಮ್ಮ ಯಲ್ಲಪ್ಪ ಹಿರೇಕುರಬರ (70), ಸಿಂದಗಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಅಮೋಘ ಹಿರೇಕುರಬರ (46) ಮೃತ ದುರ್ದೈವಿಗಳಾಗಿದ್ದಾರೆ.
ನಿನ್ನೆ ಮಂಗಳವಾರ ಮಧ್ಯಾಹ್ನ ಮೂರು ಗಂಟೆಗೆ ತಾಯಿ ಮೃತಪಟ್ಟರೆ, ಸಂಜೆ ಐದು ಗಂಟೆಗೆ ಮಗ ಅಮೋಘ ಸಾವನ್ನಪ್ಪಿದ್ದಾರೆ.
ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಾಯಿ-ಮಗ ಚಿಕಿತ್ಸೆ ಫಲಿಸದೆ ನಿನ್ನೆ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದು, ಇಡೀ ಕುಟುಂಬದಲ್ಲಿ ನೀರವ ಮೌನ ಆವರಿಸಿಕೊಂಡಿದೆ.