ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಹೀಗಾಗಿ ಸರ್ಕಾರ ಕೊರೋನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಲಾಕ್ಡೌನ್, ಸೀಲ್ಡೌನ್, ನೈಟ್ ಕರ್ಫ್ಯೂನಂಥ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದಲ್ಲದೇ ಮಹಾರಾಷ್ಟ್ರ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.
ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಒಂದರಿಂದ ಎಂಟನೇ ತರಗತಿಯ ಮಕ್ಕಳನ್ನು ವಾರ್ಷಿಕ ಪರೀಕ್ಷೆ ನಡೆಸದೇ ಪಾಸ್ ಮಾಡಲು ನಿರ್ಧರಿಸಿದೆ. ಕೋವಿಡ್-19 ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಿರುವುದರಿಮದ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ನಿರ್ಧಾರಕ್ಕೆ ಬರಲಾಗಿದೆ.
ಇದಲ್ಲದೇ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಮಹಾರಾಷ್ಟ್ರ ಶಿಕ್ಷಣ ಸಚಿವೆ ವರ್ಷಾ ಗಾಯಕವಾಡ್ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. 9ರಿಂದ 11ನೇ ತರಗತಿಯ ವಿದ್ಯಾರ್ಥಿಗಳ ಬಗ್ಗೆ ಶೀಘ್ರದಲ್ಲಿಯೇ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ಸಚಿವರು ಹೇಳಿದ್ದಾರೆ.