ಕೊಲಾರ : ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇಂದು ರಾಷ್ಟ್ರೀಯ ಕಬ್ಬಡಿ ಆಟಗಾರ ಕೊರೊನಾಗೆ ಬಲಿಯಾಗಿದ್ದಾರೆ. ಮಾಲೂರು ತಾಲೂಕಿನ ಕಪ್ಪೂರು ಗ್ರಾಮದ ಗೋಪಾಲ್ (39) ಎಂದು ಗುರುತಿಸಲಾಗಿದೆ.
ಕಬ್ಬಡ್ಡಿ ಆಟಗಾರ ಗೋಪಾಲ್ ಅವರಿಗೆ 15 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ನಾಲ್ಕೈದು ದಿನಗಳ ಹಿಂದೆ ಅರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಡ ರಾತ್ರಿ ಸಾವನ್ನಪ್ಪಿದ್ದಾರೆ.