ಬೆಂಗಳೂರು : ರಂಗಭೂಮಿ, ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಸಕ್ರಿಯವಾಗಿದ್ದ ಹಿರಿಯ ನಟ ಬಿ. ಎಂ. ಕೃಷ್ಣೇಗೌಡ ಅವರು ಸಾವನ್ನಪ್ಪಿದ್ದಾರೆ. 80 ವರ್ಷದವರಾಗಿದ್ದ ಕೃಷ್ಣೇಗೌಡ ಅವರಿಗೆ 20 ದಿನಗಳ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.
ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಕೋವಿಡ್ ಟೆಸ್ಟ್ ನೆಗೆಟಿವ್ ಸಹ ಬಂದಿತ್ತು. ನಂತರ ಮನೆಗೆ ಮರಳಿದ್ದ ಕೃಷ್ಟೇಗೌಡ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಗುಣಮುಖರಾಗಿ ಮನೆಗೆ ಮರಳಿದ ನಂತರವೂ ಕೃಷ್ಣೇಗೌಡ ಅವರಿಗೆ ಶ್ವಾಸಕೋಶದ ಸಮಸ್ಯೆ ಮತ್ತೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಕನ್ನಡದ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ರಂಗಭೂಮಿ ಹಿನ್ನಲೆ ಹೊಂದಿರುವ ಕೃಷ್ಣೇಗೌಡ ಅವರು ಸಾಕಷ್ಟು ನಾಟಕಗಳಲ್ಲೂ ಬಣ್ಣ ಹಚ್ಚಿದ್ದಾರೆ.