ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಇಂದು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಬ್ರೇನ್ ಸ್ಟ್ರೋಕ್ ಆದ ಕಾರಣ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಮ್ಮ. ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಯೂ ಕೋರೋನ ಸೋಂಕು ತಗುಲಿದಾಗ ನಟ ವಿಜಯ್ ಮನೆಯಲ್ಲೇ ತಾಯಿಗೆ ಎಲ್ಲ ಚಿಕಿತ್ಸೆ ಕೊಡಿಸಿ ಆರೋಗ್ಯ ಚೇತರಿಸಿಕೊಂಡಿತು ಎನ್ನುವಾಗಲೇ ಬ್ರೇನ್ ಸ್ಟ್ರೋಕ್ ಆಗಿತ್ತು. 20 ದಿನಗಳ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.