ಉತ್ತರ ಭಾರತದ ಹಲವೆಡೆ ಕಂಪಿಸಿದ ಭೂಮಿ: ವೈರಲ್ ಆಗುತ್ತಿವೆ ವಿಡಿಯೋಗಳು

ನವದೆಹಲಿ: ರಾಷ್ಟ್ರ ರಾಜಧಾನಿ ಸೇರಿದಂತೆ ಉತ್ತರ ಭಾರತದ ಹಲವೆಡೆ ನಿನ್ನೆ ರಾತ್ರಿ ಭೂಮಿ ಕಂಪಿಸಿದೆ. ಶ್ರೀನಗರ, ನವದೆಹಲಿ, ಉತ್ತರಾಖಂಡ್, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರಪ್ರದೇಶಗಳಲ್ಲಿ ಭೂಕಂಪವಾದ ಬಗ್ಗೆ ವರದಿಯಾಗಿದೆ. ಭೂಕಂಪನದಿಂದ ಮನೆಯಲ್ಲಿದ್ದ ವಸ್ತುಗಳು ಅಲುಗಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ನಿನ್ನೆ ರಾತ್ರಿ 10.30ರ ವೇಳೆಗೆ ಭೂಮಿ ಕಂಪಿಸಿದ್ದು, ಭೂಮಿಯಿಂದ 86 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ. ಮಧ್ಯ ಏಷ್ಯಾದಲ್ಲಿರುವ ತಜಕಿಸ್ತಾನದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಅಮೃತಸರದಲ್ಲಿ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.1ರಷ್ಟು ದಾಖಲಾಗಿದೆ. ನವದೆಹಲಿಯಲ್ಲಿ 6.2 ರಷ್ಟು ತೀವ್ರತೆ ದಾಖಲಾಗಿದೆ. ಆದರೆ ಯಾವುದೇ ಪ್ರಾಣಹಾನಿಗಳಾಗಿಲ್ಲ ಎಂದು ರಾಷ್ಟ್ರೀಯ ಭೂಕಂಪನಾಶಾಸ್ತ್ರ ಅಧ್ಯಯನ ಕೇಂದ್ರ ಮಾಹಿತಿ ನೀಡಿದೆ.

ದೆಹಲಿಯ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದ್ದು ಎಲ್ಲರ ಕ್ಷೇಮಕ್ಕೆ ಪ್ರಾರ್ಥಿಸುತ್ತೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಪಂಜಾಬ್ ನಲ್ಲಿ ಭೂಕಂಪದಿಂದ ಯಾವುದೇ ಆಸ್ತಿಹಾನಿ ಮತ್ತು ಪ್ರಾಣಹಾನಿ ಸಂಭವಿಸಿಲ್ಲ. ಪಂಜಾಬ್ ಸರ್ಕಾರ ಪರಿಸ್ಥಿತಿಯ ಬಗ್ಗೆ ಕಣ್ಣಿಟ್ಟಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ. ಶ್ರೀನಗರದಿಂದ ಕೇವಲ 450 ಕಿ.ಮೀ. ದೂರದಲ್ಲಿರುವ ತಜಕಿಸ್ತಾನದಲ್ಲಿ ಭೂಕಂಪದ ಕೇಂದ್ರಬಿಂದು ಇದ್ದಿದ್ದರಿಂದ ಪಾಕಿಸ್ತಾನದಲ್ಲಿಯೂ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!