ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಪರಿಸ್ಥಿತಿ ಕೈಮೀರಿದೆ. ಜನರು ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಭಾನುವಾರ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ಶ್ರೀಲಂಕಾ ಸರ್ಕಾರದ ಸಚಿವ ಸಂಪುಟದ ಎಲ್ಲ 26 ಸದಸ್ಯರು ದಿಢೀರ್ ರಾಜೀನಾಮೆ ನೀಡಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ಗೊಬಾಟಯ ರಾಜಪಕ್ಸ ಮನೆ ಮುಂದೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ನಂತರ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 36 ಗಂಟೆಗಳ ಕಾಲ ಕರ್ಫ್ಯೂ ಹೇರಲಾಗಿದೆ. ಈ ನಡುವೆ ಸಚಿವ ಸಂಪುಟ ಎಲ್ಲಾ 26 ಸಚಿವರು ರಾಜೀನಾಮೆ ನೀಡಿದ್ದಾರೆ. ಎಲ್ಲ ಸಂಪುಟ ಸಚಿವರು ನಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿಗೆ ಸಲ್ಲಿಸಿದ್ದಾರೆ.
26 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಶ್ರೀಲಂಕಾದ ಸೆಂಟ್ರಲ್ ಬ್ಯಾಂಕ್ನ ಗವರ್ನರ್ ಅಜಿತ್ ನಿವಾರ್ಡ್ ಕ್ಯಾಬ್ರಾಲ್ ಅವರು ಕೂಡ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿ ಖಚಿತಪಡಿಸಿರುವ ಅವರು, ‘ಎಲ್ಲ ಸಚಿವ ಸಂಪುಟದ ಸದಸ್ಯರು ರಾಜೀನಾಮೆ ನೀಡಿದ ಹಿನ್ನೆಲೆ, ಇಂದು ನಾನು ಕೂಡ ಶ್ರೀಲಂಕಾದ ಸೆಂಟ್ರಲ್ ಬ್ಯಾಂಕ್ನ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು ಅಧ್ಯಕ್ಷ ಗೊಟಾಬಯ ರಾಜಪಕ್ಸ ಅವರಿಗೆ ನೀಡಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ : – ಶ್ರೀಲಂಕಾ ಪರಿಸ್ಥಿತಿ ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ..! ಉಚಿತ ಭಾಗ್ಯಗಳು ಭಾರತಕ್ಕೂ ಮುಳುವಾಗುತ್ತಾ?