ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆದಿದ್ದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಕೆಜಿಎಫ್ ಬಾಬು (KGF Babu) ನಿವಾಸದ ಮೇಲೆ ED ಅಧಿಕಾರಿಗಳು (ED Officials) ಇಂದು ಬೆಳಗ್ಗೆ 6 ಗಂಟೆಗೆ ದಾಳಿ ನಡೆಸಿದ್ದಾರೆ.
ಉಮಾ ಡೆವಲಪರ್ಸ್ ಕಂಪನಿ ಮಾಲೀಕರಾಗಿರುವ ಕೆಜಿಎಫ್ ಬಾಬು ನಿವಾಸದಲ್ಲಿ ಅಧಿಕಾರಿಗಳು CRPF ಭದ್ರತೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ : – ಲಕ್ಷ್ಮಣ ಸವದಿಗೆ ಸಿಹಿ ತಿನಿಸಿ ಶುಭ ಕೋರಿದ ಸಿಎಂ ಬೊಮ್ಮಾಯಿ
ಈಗಾಗಲೇ ಸ್ಮಾಪ್ ಉದ್ಯಮದಲ್ಲಿ ಕೋಟ್ಯಂತರ ರೂಪಾಯಿ ಗಳಿಸಿದ್ದಾಗಿ ಯೂಸುಫ್ ಶರೀಫ್ ಕೆಜಿಎಫ್ ಬಾಬು ಕೆಲವೆಡೆ ಹೇಳಿಕೊಂಡಿದ್ದಾರೆ. ಕೋಟಿ ಕೋಟಿ ವ್ಯವಹಾರ ನಡೆಸುತ್ತಿರುವ ಕೆಜಿಎಫ್ ಬಾಬು ಮನೆಯಲ್ಲಿ ಸುಮಾರು 10 ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ : – ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ