ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ- ಸರ್ಕಾರವೇ ಹಣ ನೀಡಿ ಜನರನ್ನು ಕರೆಸಿದೆ ಎಂದ ಸಿದ್ದರಾಮಯ್ಯ

ಕೊಡಗಿ (Kodagu) ನಲ್ಲಿ ನೆರೆ ಹಾನಿ ವೀಕ್ಷಣೆಗೆ ಆಗಮಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (siddaramaiah) ಅವರಿಗೆ ಪ್ರತಿಭಟನೆ ಬಿಸಿ ತಟ್ಟಿದೆ. ಕೊಡಗಿಗೆ ಆಗಮಿಸಿದ ಸಿದ್ದರಾಮಯ್ಯ ಅವರ ಕಾರಿಗೆ ಅಡ್ಡಬಂದ ಬಿಜೆಪಿ ಕಾರ್ಯಕರ್ತರು ಕಾರಿನತ್ತ ಮೊಟ್ಟೆ ಎಸೆದು ಘೋಷಣೆಗಳನ್ನು ಕೂಗಿದ್ದಾರೆ.
ಸಿದ್ದರಾಮಯ್ಯ ಅವರ ಕಾರಿಗೆ ಜನರಲ್ ತಿಮ್ಮಯ್ಯ (general thimmaiah) ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ವೃತ್ತದ ಮತ್ತೊಂದು ಪಾರ್ಶ್ವದಲ್ಲಿ ಪ್ರತಿಭಟನೆಗೆ ಕುಳಿತರು.‌ ಸುಮಾರು ಅರ್ಧ ಗಂಟೆಗಳ ಕಾಲ ಉಭಯ ಕಾರ್ಯಕರ್ತರು ಒಂದೇ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಉಭಯ ಪಕ್ಷದ ಕಾರ್ಯಕರ್ತರ ಮನವೊಲಿಸಿ ವಾಪಸ್ ಕಳುಹಿಸಿದರು.

ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಕೊಯನಾಡು ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ಇದನ್ನೂ ಓದಿ : – 10 ಮಕ್ಕಳನ್ನು ಹೆತ್ತವರಿಗೆ ಭರ್ಜರಿ ಪುರಸ್ಕಾರ ..! ಇದು ಎಲ್ಲಿ ಗೊತ್ತಾ…?

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ದು ಹೇಡಿಗಳ ಕೆಲಸ. ಕೊಡಗಿನಲ್ಲಿ ಸಮರ್ಪಕವಾಗಿ ಪರಿಹಾರ ನೀಡಿಲ್ಲ. ಡಿ.ಸಿ ಕಚೇರಿ ತಡೆಗೋಡೆ ಕಳಪೆಯಾಗಿದೆ. ಇದು ನನಗೆ ಗೊತ್ತಾಗಬಾರದು ಎಂದೇ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ಸತ್ತಿದೆ. ಹಾಗಾಗಿ ಹಣ ಕೊಟ್ಟು ಜನರನ್ನು ಕರೆದುಕೊಂಡು ಬಂದು ಘೋಷಣೆ ಕೂಗಿಸಿದ್ದಾರೆ ಎಂದು ಆರೋಪಿಸಿದ್ರು.

ಇದನ್ನೂ ಓದಿ : – ರಾಜ್ಯದ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡಿ ಸರ್ಕಾರ ಆದೇಶ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!