ಅಧಿವೇಶನ ಕರೆಯಲು ಸರ್ಕಾರ ಹಿಂದೇಟು ಹಾಕಲಾಗುತ್ತೆ ಎಂಬ ಕುಮಾರಸ್ವಾಮಿ ( KUMARASWAMY ) ಆರೋಪಕ್ಕೆ ಸಚಿವ ಅಶ್ವಥ್ ನಾರಾಯಣ್ ( ASHWATH NARAYAN ) ಲೇವಡಿ ಮಾಡಿದ್ದಾರೆ.
ಅಧಿವೇಶನ ಇದ್ದಾಗಲೇ ಕುಮಾರಸ್ವಾಮಿ ಸದನಕ್ಕೆ ಬರೋದಿಲ್ಲ. ಎಲ್ಲಿದ್ಯಪ್ಪ ಕುಮಾರಸ್ವಾಮಿ ಅಂತಾ ಅವರನ್ನು ಹುಡುಕಬೇಕು ? ಸದನ ಕರೀರಿ ಅನ್ನೋದು ಆಮೇಲೆ ಬರದೆ ಇರೋದು ಎಂದು ಕುಟುಕಿದ್ದಾರೆ. ಬಾಯಿಗೆ ಬಂದಂತೆ ದಿಕ್ಕು ಇಲ್ಲದಂತೆ ಗುಂಡು ಹೊಡೆಯುತ್ತಿದ್ಸಾರೆ. ರಾಮನಗರ ಜಿಲ್ಲೆಯಲ್ಲಿ ನಾವು ಚೆನ್ನಾಗಿ ಕೆಲಸ ಮಾಡ್ತಿದ್ದೇವೆ. ನಮ್ಮ ಪಕ್ಷ ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರ. ಇದು ಯಾವುದೋ, ಕಾಂಗ್ರೆಸ್, ( CONGRESS )ಜೆಡಿಎಸ್ ನಂತೆ ಪ್ರವೈಟ್ ಕಂಪನಿ ತರ ಅಲ್ಲ. ನಮ್ಮಲ್ಲಿ ಯಾರು ಏನು ಬೇಕಾದರೂ ಆಗಬಹುದು. ಆದರೆ ಅಲ್ಲಿ ಕುಟುಂಬಕ್ಕಷ್ಟೇ ಅಧಿಕಾರ ಎಂದು ತಿಳಿಸಿದ್ದಾರೆ. ಸೋನಿಯಾ ಗಾಂಧಿ ಕಂಪನಿ, ರಾಹುಲ್ ಗಾಂಧಿ ಕಂಪನಿ, ಪ್ರಿಯಾಂಕಾ ಗಾಂಧಿ ಕಂಪನಿ, ರಾಮನಗರದಲ್ಲಿ ಒಂದು ಕುಮಾರಸ್ವಾಮಿ ಒಂದು ಕಂಪನಿ ಎಂದು ಲೇವಡಿ ಮಾಡಿದ್ದಾರೆ. ಈ ಸಮಾಜದಲ್ಲಿ ಯಾವುದಾದರೂ ಅರ್ಥ ಇಲ್ಲದೆ ಇರೋ ಪಕ್ಷಗಳು ಅಂದರೆ ಇವುಗಳೇ ಎಂದು ಹೇಳಿದ್ದಾರೆ. ಇದನ್ನೂ ಓದಿ : – ಅಯೋಧ್ಯೆಯಲ್ಲಿ ನಡೆದಿರುವ ಭೂ ಅಕ್ರಮದಲ್ಲಿ ಬಿಜೆಪಿ ಶಾಸಕರ ವಿರುದ್ಧ ಆರೋಪ ವಿಚಾರ – ಟ್ವೀಟ್ ಮೂಲಕ ಕಿಡಿಕಾರಿದ ಕಾಂಗ್ರೆಸ್
ಬಿಜೆಪಿ ( BJP ) ಯವರು ನಾಟಕ ಮಾಡ್ತಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತಂತೆಯೂ ಸಿದ್ದರಾಮಯ್ಯಗೆ ಸಚಿವ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ. ಯಾರಿಗಾದರೂ ಚೆನ್ನಾಗಿ ನಾಟಕ ಮಾಡೋಕೆ ಬರುತ್ತೆ ಅಂದರೆ ಅದು ಸಿದ್ದರಾಮಯ್ಯ ನವರಿಗೆ ಮಾತ್ರ. ನಾಟಕದ ಅನುಭವವನ್ನು ಅವರು ಬೇರೆಯವರಿಗೆ ಹೇಳಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡೋದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲಿ ತಪ್ಪು, ಕಂಡು ಹಿಡಿಯೋದು, ದೋಷ ಎತ್ತಿ ಹಿಡಿಯೋದು ಸರಿಯಲ್ಲ. ಒಳ್ಳೆಯದು ಮಾಡೋಕೆ ಆಗಿಲ್ಲ ಅಂದರೆ ಸಮಾಜದಲ್ಲಿ ಗೊಂದಲ ಸೃಷ್ಟಿಸಬೇಡಿ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ಒಳ್ಳೆಯದು ಮಾಡೋಕೆ ಯೋಗ್ಯತೆ ಇಲ್ಲ ಅಂದರೆ ಕೆಟ್ಟದ್ದನ್ನು ಹೇಳಬೇಡಿ. ನಿಮ್ಮ ಭಕ್ತಿ ದೇಶದ ಮೇಲೆ ಇದ್ರೆ ತಮ್ಮ ಕರ್ತವ್ಯದ ಮೂಲಕ ಮಾಡಿ. ಅದು ಬಿಟ್ಟು ಇಂತಹ ಢೋಂಘಿ ಹೇಳಿಕೆಗಳನ್ನು ನಿಲ್ಲಿಸಿ ಎಂದು ಅಶ್ವತ್ಥ್ ನಾರಾಯಣ್ ಗುಡುಗಿದ್ದಾರೆ.
ಇದನ್ನೂ ಓದಿ : – ಮಳೆ ನಿಲ್ಲಿಸುವಂತೆ ಕೆಪಿಸಿಸಿ ವತಿಯಿಂದ ಕಿಗ್ಗಾದ ಶ್ರೀ ಋಷ್ಯ ಶೃಂಗೇಶ್ವರನಿಗೆ ವಿಶೇಷ ಪೂಜೆ