ಭಾರತ ತಂಡ ಹೆಡಿಂಗ್ಲೆಯಲ್ಲಿ ಬುಧವಾರ ಆರಂಭಗೊಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿದೆ.
ಇನಿಂಗ್ಸ್ ಆರಂಭಿಸಿದ ಭಾರತ ಎರಡನೇ ಟೆಸ್ಟ್ ನಲ್ಲಿ ಶತಕ ಸಿಡಿಸಿದ್ದ ಕೆ.ಎಲ್. ರಾಹುಲ್ ಮತ್ತು ಚೇತೇಶ್ವರ್ ಪೂಜಾರ ಅವರ ವಿಕೆಟ್ ಗಳನ್ನು ಅಲ್ಪ ಮೊತ್ತಕ್ಕೆ ಕಳೆದುಕೊಂಡಿದ್ದು, 4 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಗಿದೆ.
ಲೀಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ ಇಂಗ್ಲೆಂಡ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಡೇವಿಡ್ ಮಲನ್, ಕ್ರೇಗ್ ಓವರ್ಟನ್ ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಲಾರ್ಡ್ಸ್ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 151 ರನ್ ಗಳ ಭಾರೀ ಅಂತರದಿಂದ ಗೆದ್ದು 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0ಯಿಂದ ಮುನ್ನಡೆ ಪಡೆದಿದೆ.