ಕರ್ನಾಟಕದ ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಸೇರಿಕೊಂಡಿದ್ದಾರೆ.
ಭಾರತ ತಂಡದ ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದ ಪ್ರಸಿದ್ಧ ಕೃಷ್ಣ ಗುರುವಾರ ಓವಲ್ ನಲ್ಲಿ ಆರಂಭಗೊಳ್ಳಲಿರುವ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇದೇ ವರ್ಷ ಮಾರ್ಚ್ ನಲ್ಲಿ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದ ಪ್ರಸಿದ್ಧ ಮೂರು ಪಂದ್ಯಗಳಲ್ಲಿ ಆಡಿದ್ದರು.