ಭಾರತ ವಿರುದ್ಧದ ನಿರ್ಣಾಯಕ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟ್ ಮಾಡುವಂತೆ ವಿರಾಟ್ ಪಡೆಯನ್ನು ಆಹ್ವಾನಿಸಿದೆ. ಈ ಮೂಲಕ ಮತ್ತೊಮ್ಮೆ ರನ್ ಚೇಸ್ ಮಾಡುವ ನಿರ್ಧಾರ ಕೈಗೊಂಡಿದೆ.
ಪುಣೆಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಫೀಲ್ಡಿಂಗ್ ಆಯ್ದುಕೊಂಡರು. ಹಿಂದಿನ ಪಂದ್ಯದಲ್ಲೂ ಇಂಗ್ಲೆಂಡ್ ರನ್ ಚೇಸ್ ಮಾಡಿ ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿತ್ತು.
ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಸ್ಪಿನ್ನರ್ ಕುಲದೀಪ್ ಯಾದವ್ ಬದಲು ನಟರಾಜನ್ ಅವರಿಗೆ ಅವಕಾಶ ನೀಡಲಾಗಿದೆ. ಕಳೆದ ಪಂದ್ಯದಲ್ಲಿ ಕುಲದೀಪ್ ದುಬಾರಿ ಆಗಿದ್ದೂ ಅಲ್ಲದೇ ಒಂದೂ ವಿಕೆಟ್ ಪಡೆಯದೇ ನಿರಾಸೆ ಮೂಡಿಸಿದ್ದರು. ಇಂಗ್ಲೆಂಡ್ ತಂಡದಲ್ಲಿ ಮಾರ್ಕ್ ವುಡ್ ತಂಡಕ್ಕೆ ಮರಳಿದ್ದಾರೆ.