ತಮ್ಮ ಹಿಡ ಹಿಡಿತವಿಲ್ಲದ ನಾಲಗೆ, ವಾಕ್ ಪ್ರಹಾರ, ವಿರೋಧ ಪಕ್ಷದ ನಾಯಕರ ವಿರುದ್ಧ ತೀವ್ರ ಟೀಕೆ, ವಾದ-ವಿವಾದಗಳಿಂದ ಆಗಾಗ ಸುದ್ದಿಯಾಗುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ (Eshwarappa) ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ನಡುವೆ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ. ಸಿಎಂ ಬೊಮ್ಮಾಯಿ (CM BOMMAI) ಕರಾವಳಿ ಪ್ರವಾಸದಲ್ಲಿರೋದ್ರಿಂದ ಇಂದು ಮಧ್ಯಾಹ್ನ ಬೆಂಗಳೂರಿಗೆ ವಾಪಾಸ್ಸಾಗಲಿದ್ದಾರೆ. ಸಿಎಂ ಬಂದ ಬಳಿಕ ಈಶ್ವರಪ್ಪ ರಾಜೀನಾಮೆ ನೀಡೋ ಸಾಧ್ಯತೆ ಇದೆ. ಸಂತೋಷ್ ಆತ್ಮಹತ್ಯೆ ಪ್ರಕರಣವನ್ನ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ ನೀಡಿನೀಡಿದೆ ಎನ್ನಲಾಗಿದೆ. ಈಗಾಗಲೇ ಸಿಎಂ(CM) ಜೊತೆಗೆ ದೂರವಾಣಿ ಮೂಲಕ ಸಚಿವ ಈಶ್ವರಪ್ಪ ಚರ್ಚೆ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹಿಂಡಲಗ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ (SANTHOSH PATIL) ಗುತ್ತಿಗೆ ಕಾಮಗಾರಿಯೊಂದರಲ್ಲಿ ಸಚಿವ ಈಶ್ವರಪ್ಪ ವಿರುದ್ಧ 40% ಆರೋಪ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೆಲ ತಿಂಗಳ ಹಿಂದೆ ಸುದ್ದಿಯಾಗಿದ್ದರು. ಅವರ ಆರೋಪವನ್ನು ತಳ್ಳಿಹಾಕಿದ್ದ ಹಿರಿಯ ಸಚಿವ ಈಶ್ವರಪ್ಪ ಸಂತೋಷ್ ಪಾಟೀಲ್ ವಿರುದ್ಧ ನ್ಯಾಯಾಲಯದ ಮೊರೆ ಹೋಗಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅದು ವಿಚಾರಣೆ ಹಂತದಲ್ಲಿರುವಾಗಲೇ ಸಂತೋಷ್ ಪಾಟೀಲ್ ನಿನ್ನೆ ಏಪ್ರಿಲ್ 12ರಂದು ಉಡುಪಿಯ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನು ಓದಿ :- ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನಾನು ಕಾರಣ ಅಲ್ಲ- ನಾನ್ಯಾಕೆ ರಾಜೀನಾಮೆ ಕೊಡಲಿ: ಕೆ ಎಸ್ ಈಶ್ವರಪ್ಪ