ಉಚಿತ ಕೊರೊನಾ ಲಸಿಕೆ ಅಭಿಯಾನ ದೇಶಾದ್ಯಂತ ಇಂದಿನಿಂದ ಆರಂಭಗೊಂಡಿದ್ದು, ರಾಜ್ಯದಲ್ಲಿ ನಿತ್ಯ 7 ಲಕ್ಷ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನ ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕೊರೊನಾ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೊನಾದಿಂದ ರಾಜ್ಯ ಮತ್ತು ದೇಶ ಮುಕ್ತಗೊಳ್ಳಬೇಕು. ಆದ್ದರಿಂದ ಎಲ್ಲರೂ ಲಸಿಕೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.
7 ಲಕ್ಷ ಲಸಿಕೆ ಒಂದೇ ದಿನ ಕೊಡಬೇಕು ಅಂತ ಗುರಿ ಹೊಂದಲಾಗಿದೆ. 18ವರ್ಷ ಮೆಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುತ್ತಿದ್ದೇವೆ. ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಪೂರ್ಣ ಮಾಡುವುದು ಸರಕಾರದ ಗುರಿಯಾಗಿದೆ. ಕೊರೊನಾ ಇರುವುದರಿಂದ ಯೋಗ ದಿನಾಚರಣೆಯನ್ನು ಸಾಂಕೇತಿಕವಾಗಿ ಮನೆಯಲ್ಲೇ ಆಚರಣೆ ಮಾಡಿದ್ದೇವೆ. ಯೋಗ ದೈಹಿಕ ಸಾಮರ್ಥಕ್ಕೆ ಮಾತ್ರವಲ್ಲ, ಮಾನಸಿಕ ಆರೋಗ್ಯಕ್ಕೆ ಕೂಡ ಉತ್ತಮ ಎಂದು ಅವರು ವಿವರಿಸಿದರು.