ಪಂಚರಾಜ್ಯಗಳ ಚುನಾವಣೆ ಮತದಾನ ಪ್ರಕ್ರಿಯೆ ಅಂತ್ಯಗೊಂಡ ಬೆನ್ನಲ್ಲೇ ವಿವಿಧ ಸಂಸ್ಥೆಗಳು ನಡೆಸಿದ ಸಮೀಕ್ಷೆಗಳು ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದಿದೆ.
ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ 234 ಸ್ಥಾನಗಳ ಪೈಕಿ ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದ್ದು, ಅಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ.
ತೃಣಮೂಲ ಕಾಂಗ್ರೆಸ್ 150ರಿಂದ 170 ಸ್ಥಾನ ಗೆಲ್ಲಲಿದೆ. ಬಿಜೆಪಿ 121ರಿಂದ 170 ಸ್ಥಾನ ಪಡೆಯಲಿದೆ. ಕಾಂಗ್ರೆಸ್ 49 ಸ್ಥಾನಗಳನ್ನು ಪಡೆಯಲಿದ್ದು, ಈ ಬಾರಿ ಕೂಡ ಎಡಪಕ್ಷಗಳು ನಾಲ್ಕನೇ ಸ್ಥಾನಕ್ಕೆ ಕುಸಿಯುವ ಸಾಧ್ಯತೆ ಇದೆ.
ತಮಿಳುನಾಡಿನಲ್ಲಿ 140 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಆಡಳಿತಾರೂಢ ಎಐಎಡಿಎಂಕೆ ಮತ್ತು ಬಿಜೆಪಿ ಮೇತ್ರಿ ಕೂಟದ ವಿರುದ್ಧ ಅಲೆ ಎದ್ದಿದ್ದು, ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿ ಕೂಟ ಜಯಭೇರಿ ಬಾರಿಸಲಿದ್ದು, 175ರಿಂದ 195 ಸ್ಥಾನಗಳ ಮೂಲಕ ಜಯಭೇರಿ ಬಾರಿಸಲಿದ್ದು, ಎಐಡಿಎಂಕೆ ಪಕ್ಷ 38-40 ಹಾಗೂ ಬಿಜೆಪಿ 1ರಿಂದ 5 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷೆಗಳು ತಿಳಿಸಿವೆ.
ಅಸ್ಸಾಂನಲ್ಲಿ ಬಿಜೆಪಿ ಬಹುಮತ ಪಡೆಯಲಿದ್ದು, ಪುದುಚೇರಿಯಲ್ಲಿ ಕೂಡ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಕೂಟ ಜಯಭೇರಿ ಬಾರಿಸುವ ಸಾಧ್ಯತೆ ಇದೆ. ಕೇರಳದಲ್ಲಿ ವಿಜಯನ್ ಪರಿಣಯ್ ನೇತೃತ್ವದ ಎಲ್ ಡಿಎಫ್ ಮೈತ್ರಿಕೂಟ ಎದುರಾಳಿಗಳನ್ನು ಧೂಳೀಪಟ ಮಾಡಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ಖಚಿತ ಎಂದು ಸಮೀಕ್ಷೆಗಳು ಹೇಳಿವೆ.
ಎನ್ ಡಿಟಿವಿ, ಇಂಡಿಯಾ ಟುಡೆ, ಟೈಮ್ಸ್ ಆಫ್ ಇಂಡಿಯಾ, ಸಿ-ವೋಟರ್ಸ್ ಸೇರಿದಂತೆ ಸುಮಾರು 6 ಮಾಧ್ಯಮಗಳು ಹಾಗೂ ಚುನಾವಣಾ ಸಮೀಕ್ಷಾ ಸಂಸ್ಥೆಗಳು ಈ ವರದಿ ನೀಡಿದೆ.