ಬಟ್ಟೆ ವ್ಯಾಪಾರದಲ್ಲಿ ನಷ್ಟ ಆಗಿದ್ದ ವ್ಯಾಪಾರಿ ನಕಲಿ ನಂದಿನಿ ತಪ್ಪು ತಯಾರಿಸಿ ಮಾರಾಟಕ್ಕೆ ಯತ್ನಿಸಿದ್ದನ್ನು ಬೆಂಗಳೂರು ಸಮೀಪದ ನೆಲಮಂಗಲ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬೆಂಗಳೂರು ಉತ್ತರ ತಾಲೂಕು ಬೈಯಂಡಹಳ್ಳಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪದ ಜಾಲ ಪತ್ತೆ ಹಚ್ಚಿದ ಕೆಎಂಎಫ್ ಅಧಿಕಾರಿಗಳು ರಾಜಸ್ಥಾನ ಮೂಲದ ಬಾಬು ಲಾಲ್ (40) ಎಂಬಾತನನ್ನು ಬಂಧಿಸಿದ್ದಾರೆ.
ನಕಲಿ ನಂದಿನಿ ತುಪ್ಪದ ಅಡ್ಡೆ ಮೇಲೆ ಕೆಎಂಎಫ್ ಅಧಿಕಾರಿಗಳೊಂದಿಗೆ ಮಾದನಾಯಕನಹಳ್ಳಿ ಪೊಲೀಸರ ದಾಳಿ ನಡೆಸಿದ್ದು, ತುಪ್ಪ, ಸ್ಟೌವ್ ಸೇರಿದಂತೆ 15 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.