ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿದ್ದಕ್ಕಾಗಿ ತಂದೆ-ಮಗನ ನಡುವೆ ಆರಂಭವಾದ ಜಗಳ ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದರೊಂದಿಗೆ ಅಂತ್ಯಗೊಂಡ ಭೀಕರ ಘಟನೆ ಮಂಗಳೂರಿನ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಕೊಪ್ಪರಿಗೆಗುತ್ತು ನಿವಾಸಿ ವಿಶ್ವನಾಥ ಶೆಟ್ಟಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ರ ಸ್ವಾಮೀತ್ ಶೆಟ್ಟಿ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ ಸ್ವಾಮೀತ್ ಶೆಟ್ಟಿಯ ತಂದೆ ವಿಶ್ವನಾಥ ಶೆಟ್ಟಿ ತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದು ಬಳಿಕ ಪೆಟ್ರೋಲನ್ನು ಮಗನ ಮೈ ಮೇಲೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.