ನಾಗಾಲ್ಯಾಂಡ್, ಮೇಘಾಲಯ ( MEGALAYA ) ಮತ್ತು ತ್ರಿಪುರಾ ವಿಧಾನಸಭೆಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಫೆಬ್ರುವರಿ 16ರಂದು ತ್ರಿಪುರಾ, ಫೆಬ್ರುವರಿ 27ರಂದು ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಮಾರ್ಚ್ 2 ರಂದು ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ :- KGF Babu- ಚುನಾವಣೆ ತಯಾರಿಯಲ್ಲಿರುವ ಕೋಟಿ ಕುಬೇರ ಕೆಜಿಎಫ್ ಬಾಬುಗೆ ED ಶಾಕ್
ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳ ವಿಧಾನಸಭೆಗಳ ಐದು ವರ್ಷಗಳ ಅವಧಿಯು ಕ್ರಮವಾಗಿ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22ರಂದು ಕೊನೆಗೊಳ್ಳಲಿದೆ. ಪ್ರತಿ ರಾಜ್ಯದಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಿಗದಿಪಡಿಸಲಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾದಲ್ಲಿ ಒಟ್ಟು 62.8 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಸದ್ಯ ತ್ರಿಪುರಾದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರವಿದ್ದು, ನಾಗಾಲ್ಯಾಂಡ್‌ನಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಪ್ರೊಗ್ರೆಸ್ಸೀವ್ ಪಾರ್ಟಿ (ಎನ್‌ಡಿಪಿಪಿ) ಆಡಳಿತದಲ್ಲಿದೆ. ಮೇಘಾಲಯದಲ್ಲಿ ನ್ಯಾಶನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಅಧಿಕಾರದಲ್ಲಿದೆ.
ಇದನ್ನು ಓದಿ :- ಎಸ್.ಆರ್ ಪಾಟೀಲ್- ನಡುವಿನ ಮುಸುಕಿನ ಗುದ್ದಾಟಕ್ಕೆ ತೆರೆ ಎಳೆದ ಸಿದ್ದರಾಮಯ್ಯ