ಢಾಕಾ: ಬಾಂಗ್ಲಾದಲ್ಲಿ ಸರಕು ಸಾಗಣೆಯ ಹಡಗು ಮತ್ತು ದೋಣಿಯ ನಡುವೆ ಡಿಕ್ಕಿ ಸಂಭವಿಸಿದೆ. ನಾರಾಯಣ್ಗಂಜ್ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ 26 ಜನ ಸಾವನ್ನಪ್ಪಿದ್ದಾರೆ. ನೌಕಾಸೇನೆ, ಕರಾವಳಿ ಕಾವಲು ಪಡೆ, ಅಗ್ನಿಶಾಮಕ ದಳ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಮ್ಯಾಜಿಸ್ಟ್ರೆಟ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಬಾಂಗ್ಲಾದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಲಾಕ್ಡೌನ್ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ದೋಣಿಯ ಮೂಲಕ ತಮ್ಮ ಊರುಗಳಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ದೋಣಿಯಲ್ಲಿ 50ಕ್ಕೂ ಅಧಿಕ ಪ್ರಯಾಣಿಕರಿದ್ದರೆನ್ನಲಾಗಿದೆ. ಡಿಕ್ಕಿ ಹೊಡೆದ ಬಳಿಕ ಸರಕು ಸಾಗಣೆಯ ಹಡಗು ಪರಾರಿಯಾಗಿದೆ ಎನ್ನಲಾಗಿದೆ.