ಬೆಳಗಾವಿ (Belgaum) ಜಿಲ್ಲೆಯ ಕೂಡ್ಲಗಿಯಲ್ಲಿ ಏಳು ಭ್ರೂಣ ಪತ್ತೆ ಕುರಿತು ಆರೋಗ್ಯ ಸಚಿವ ಸುಧಾಕರ (Sudhakar) ಪ್ರತಿಕ್ರಿಯೆ ನೀಡಿ ಭ್ರೂಣ ಹತ್ಯೆ ಮಹಾಪರಾಧ ಎಂದು ಹೇಳಿದ್ದಾರೆ. ಬೆಳಗಾವಿಯ ಕೂಡ್ಲಗಿ ಪಟ್ಟಣದ ಬಸ್ ನಿಲ್ದಾಣದ ಪಕ್ಕದ ಹಳ್ಳದಲ್ಲಿ ಐದು ಭ್ರೂಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಈಗಾಗಲೇ ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.ಜಿಲ್ಲಾ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಆರು ಸ್ಕ್ಯಾನಿಂಗ್ ಸೆಂಟರ್ (Scanning center)ಗಳಿಗೆ ನಮ್ಮ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.ಇದರಲ್ಲಿ ವೈದ್ಯರು (Doctor) , ಅಧಿಕಾರಿಗಳು ಯಾರೇ ಪಾಲ್ಗೊಂಡಿದ್ದರು ಕ್ರಮ ಕೈಗೊಳ್ಳುತ್ತೇವೆ. ಭ್ರೂಣ ಹತ್ಯೆ ಮಹಾಪರಾಧ, ಇದಕ್ಕೆ ಕಠಿಣ ಶಿಕ್ಷೆ ಇದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಇದನ್ನೂ ಓದಿ : – ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಸಿಎಂ ನೇತೃತ್ವದಲ್ಲಿ ಸಭೆ