ವಿನೋದ್ ಪ್ರಭಾಕರ್ (Vinod prabhakar) ಟೈಗರ್ ಟಾಕೀಸ್ (Tiger talkies) ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದಾರೆ. ಅದರ ಮೂಲಕ ಮೊದಲ ಪ್ರಯತ್ನವಾಗಿ “ಲಂಕಾಸುರ” (Lankasura) ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಬೆಂಗಳೂರು (Bengaluru) ಹಾಗೂ ಗೋವಾದಲ್ಲಿ (Goa) ಸುಮಾರು 65 ದಿನಗಳ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಟೀಸರ್ ಸಹ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕಿ ನಿಶಾ ವಿನೋದ್ ಪ್ರಭಾಕರ್ (Nisha vinod prabhakar) ತಿಳಿಸಿದ್ದಾರೆ.ವಿನೋದ್ ಪ್ರಭಾಕರ್ ಹಾಗೂ ಲೂಸ್ ಮಾದ ಯೋಗಿ (Loose mada yogi) ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ನಾಯಕಿಯಾಗಿ ಪಾರ್ವತಿ ಅರುಣ್ (Parvathi arun) ಅಭಿನಯಿಸಿದ್ದಾರೆ. ಹಿರಿಯ ನಟರಾದ ದೇವರಾಜ್ (Devraj), ರವಿಶಂಕರ್ (Ravishankar) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಈ ಚಿತ್ರದ ಆಕ್ಷನ್ ಸನ್ನಿವೇಶಗಳು ಮೈನವಿರೇಳಿಸುವ ಹಾಗಿದೆ. ಐದು ಸಾಹಸ ಸನ್ನಿವೇಶಗಳಿದ್ದು, ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ , ಕುಂಗ್ಫು ಚಂದ್ರು ಸಾಹಸ ನಿರ್ದೇಶನ ಮಾಡಿದ್ದಾರೆ. ಒಂದು ಸಾಹಸ ಸನ್ನಿವೇಶಕ್ಕಾಗಿ ವಿನೋದ್ ಪ್ರಭಾಕರ್ ಹತ್ತು ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಚಿತ್ರ ಬಿಡುಗಡೆಗಾಗಿ ಮರಿ ಟೈಗರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಪ್ರಮೋದ್ ಕುಮಾರ್ ಈ ಚಿತ್ರದ ನಿರ್ದೇಶಕರು. ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ. ಇದನ್ನೂ ಓದಿ : – “ತುರ್ತು ನಿರ್ಗಮನ” ದ ಮೂಲಕ ಸುನೀಲ್ ರಾವ್ ರೀ ಎಂಟ್ರಿ.. ಚಿತ್ರದ ವಿಭಿನ್ನ ಟ್ರೇಲರ್ ಗೆ ಭಾರಿ ಮೆಚ್ಚುಗೆ