ಕೋವಿಡ್ ಆಸ್ಪತ್ರೆಗೆ ಅಗ್ನಿ ದುರಂತ: 50ಕ್ಕೂ ಹೆಚ್ಚು ಮಂದಿ ಸಾವು

ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 50 ಮಂದಿ ಮೃತಪಟ್ಟಿದ್ದು, 67ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಇರಾಕ್​ ನ ನಸ್ಸೀರಿಯಾದಲ್ಲಿ ಸಂಭವಿಸಿದೆ.

ಸೋಮವಾರ ರಾತ್ರಿ ಆಕ್ಸಿಜನ್ ಟ್ಯಾಂಕ್ ಸ್ಪೊಟಗೊಂಡ ಪರಿಣಾಮ ಈ ದುರಂತ ಸಂಭವಿಸಿದ್ದು, ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೋವಿಡ್ ವಾರ್ಡ್ ನಲ್ಲಿದ್ದ ಆಕ್ಸಿಜನ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿರುವವರನ್ನು ಹೊರತರಲು ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಪ್ರಧಾನಿ ಮುಸ್ತಫಾ-ಅಲ್-ಖದೀಮಿ ತುರ್ತುಸಭೆ ನಡೆಸಿದ್ದು, ದುರಂತಕ್ಕೆ ಕಾರಣರಾದ ಆಸ್ಪತ್ರೆ ಮ್ಯಾನೇಜರ್, ನಾಸಿರಿಯಾದ ಆರೋಗ್ಯ ಮತ್ತು ರಕ್ಷಣಾ ವ್ಯವಸ್ಥಾಪಕರನ್ನು ಕೂಡಲೇ ಅಮಾನತುಗೊಳಿಸಿ ಬಂಧಿಸುವಂತೆ ಆದೇಶಿಸಿದ್ದಾರೆ.

ಬೆಂಕಿ ನಿಯಂತ್ರಣಕ್ಕೆ ಬಂದಿದ್ದರೂ ಮತ್ತು ಅಲ್-ಹುಸೇನ್ ಕೋವಿಡ್ ಆಸ್ಪತ್ರೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಆಸ್ಪತ್ರೆ ತುಂಬಾ ದಟ್ಟವಾದ ಹೊಗೆ ಆವರಿಸಿದ್ದು, ಇದರಿಂದ ರಕ್ಷಣಾ ಸಿಬ್ಬಂದಿಗೆ ಆಸ್ಪತ್ರೆಯ ಕೆಲ ಭಾಗಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಇನ್ನೂ ಅನೇಕ ಮಂದಿ ಕಾಣೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಎದುರಾಗಿಗಿದೆ.  ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರೂ ಇದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!