ರಾಮನಗರ: ಅಗರಬತ್ತಿ ಕಾರ್ಖಾನೆಗೆ ಬೆಂಕಿ ತಗುಲಿದ ಕಾರಣ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಕಗ್ಗಲಿಪುರದ ಬಳಿ ನಡೆದಿದೆ. ಕಗ್ಗಲಿಪುರದ ಬನ್ನೇರಘಟ್ಟ ಮುಖ್ಯ ರಸ್ತೆಯಲ್ಲಿ ಈ ಅಗರಬತ್ತಿ ಕಾರ್ಖಾನೆ ಇದ್ದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯಲ್ಲಿದ್ದ ಎಲ್ಲಾ ಸಿಬ್ಬಂದಿ ತಕ್ಷಣ ಕಾರ್ಖಾನೆ ಬಿಟ್ಟು ಹೊರ ಬಂದಿದ್ದಾರೆ. ನೋಡ ನೋಡುತ್ತಲೇ ಬೆಂಕಿ ಇಡೀ ಕಾರ್ಖಾನೆಯನ್ನೆ ಆವರಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎನ್ನಲಾಗುತ್ತಿದೆ. ವಿಷಯ ತಿಳಿಯುತ್ತಿದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
0 59 Less than a minute