ಪುಣೆ: ಪುಣೆಯ ಪ್ರಸಿದ್ಧ ಫ್ಯಾಷನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸುಮಾರು 500ಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ನಿನ್ನೆ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ಫ್ಯಾಶನ್ ಸ್ಟ್ರೀಟ್ನ ಅಂಗಡಿಗಳು ಭಸ್ಮವಾದ ಹಿನ್ನೆಲೆಯಲ್ಲಿ ಲಕ್ಷಾಂತರ ಮೌಲ್ಯದ ಬ್ರ್ಯಾಂಡೆಡ್ ಉಡುಪುಗಳು, ಚಪ್ಪಲಿಗಳು ಮತ್ತು ಆಭರಣ ಬೆಂಕಿಗಾಹುತಿಯಾಗಿವೆ.
ಬೆಂಕಿ ಕಾಣಿಸಿಕೊಂಡ ಬಳಿಕ ತಕ್ಷಣವೇ ಅಲ್ಲೇ ಇದ್ದ ಜನ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಯನ್ನು ಆರಂಭಿಸಿತು. ಮಧ್ಯರಾತ್ರಿ ಒಂದು ಗಂಟೆಯ ಸುಮಾರಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.