ಲಾರಿ ಡಿಕ್ಕಿ ಹೊಡೆದ ಪರಿಣಾಮ ಕೋವಿಡ್ ಸೋಂಕಿತರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ವಾಹನ ಹೊತ್ತಿ ಉರಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ಐವರು ಪಾರಾದ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿಯ ಎಡೇಹಳ್ಳಿ ಬಳಿ ಶನಿವಾರ ಲಾಕ್ ಡೌನ್ ವೇಳೆಯೂ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಐವರು ಕೊರೊನಾ ಸೋಂಕಿತರಿದ್ದ ಆ್ಯಂಬುಲೆನ್ಸ್ ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದಾಗ ಅಪರಿಚಿತ ಲಾರಿ ಡಿಕ್ಕಿ ಹೊಡೆದಿದೆ. ವಾಹನದಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿತ್ತು.
ಸ್ಥಳೀಯರು ಕೂಡಲೇ ಆ್ಯಂಬುಲೆನ್ಸ್ ನಿಂದ ಸೋಂಕಿತರನ್ನು ಹೊರಗೆ ಎಳೆದು ಬೆಂಕಿ ನಂದಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಅತೀಯಾದ ವೇಗದಲ್ಲಿದ್ದ ಅಂಬುಲೆನ್ಸ್ ಚಾಲನೆ ಮಾಡುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.