ಬಿಜಾಪುರ್: ಛತ್ತೀಸ್ಗಡದಲ್ಲಿ ನಕ್ಸಲರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಐದು ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ. ಸಿಲಿಗಾರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಯ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿತ್ತು.
ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಭದ್ರತಾ ಪಡೆ ತೆರಳಿತ್ತು ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್ ಕಮಾಂಡೋ ಬೆಟಾಲಿಯನ್, ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ ಮತ್ತು ವಿಶೇಷ ಭದ್ರತಾ ಸಿಬ್ಬಂದಿ ಭಾಗಿಯಾಗಿದ್ದರು.
ಘಟನೆಯಲ್ಲಿ 12ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಇನ್ನು, ಎನ್ಕೌಂಟರ್ ನಡೆದ ಸ್ಥಳದಲ್ಲಿ ಮಹಿಳಾ ನಕ್ಸಲ್ ಓರ್ವರ ಶವ ದೊರೆತಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎನ್ನಲಾಗಿದೆ.