ನವದೆಹಲಿ: ಇಡೀ ದೇಶವೇ ಕುತೂಹಲದಿಂದ ಗಮನಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಭಾರೀ ಸ್ಪರ್ಧೆ ನಡೆಯುತ್ತಿದೆ. ಎರಡು ಪಕ್ಷಗಳ ನಡುವೆ ಹಾವು ಏಣಿ ಆಟ ನಡೆಯುತ್ತಿದೆ. ಒಂದು ಚುನಾವಣಾ ಸುತ್ತು ಮುಗಿದಾಗ ಟಿಎಂಸಿ ಮುನ್ನಡೆ ಸಾಧಿಸಿದರೆ ಮತ್ತೊಂದು ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಾರೆ.
ಪಶ್ಚಿಮ ಬಂಗಾಳದ 116 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಗಳಿಸಿದ್ದು, ಟಿಎಂಸಿ ಅಭ್ಯರ್ಥಿಗಳು 136 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ ಎರಡು ಹಾಗೂ ಸಿಪಿಎಂ ಒಂದು ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ. 292 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಟಿಎಂಸಿ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಮುಂದುವರೆದಿದೆ.
ತಮಿಳುನಾಡಿನ 234 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಡಿಎಂಕೆ 116, ಎಐಎಡಿಎಂಕೆ 88 ಮತ್ತು ಎಂಎನ್‌ಎಂ ಪಕ್ಷ ಒಂದು ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ.
ಕೇರಳದ 140 ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆದಿದ್ದು, UDF 51, LDF 84, NDA 4, ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅಸ್ಸಾಂ 126 ಕ್ಷೇತ್ರಗಳಲ್ಲಿ ಬಿಜೆಪಿ 52 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಕಾಂಗ್ರೆಸ್ 28, ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಪುದುಚೇರಿಯಲ್ಲಿ 30 ಕ್ಷೇತ್ರಗಳಲ್ಲಿ ಬಿಜೆಪಿ 10, ಕಾಂಗ್ರೆಸ್ 5 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.