ಸ್ವಾತಂತ್ರ್ಯದಿನದಂದು ಚಾಮರಾಜಪೇಟೆ ( chamarajpete ) ಮೈದಾನದಲ್ಲಿ ಕಂದಾಯ ಇಲಾಖೆಯ ವತಿಯಿಂದಲೇ ಧ್ವಜಾರೋಹಣ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ, ಗಣೇಶೋತ್ಸವಕ್ಕೆ ವಿವಿಧ ಸಂಘಟನೆಗಳ ಮನವಿ ವಿಚಾರ ಕುರಿತಂತೆ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ( R. ASHOK ) ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆಯ ಬಳಿಕ ಮಾತನಾಡಿದ ಅಶೋಕ್ ಕಂದಾಯ ಇಲಾಖೆಯಿಂದಲೇ ಧ್ವಜಾರೋಹಣ ಮಾಡಲಾಗುತ್ತದೆ. ಶಾಸಕ ಜಮೀರ್ ಸೇರಿದಂತೆ ಯಾವುದೇ ಸಂಘಟನೆಗಳಿಗೆ ಧ್ವಜ ಹಾರಿಸಲು ಅವಕಾಶ ನೀಡುವುದಿಲ್ಲ. ಜಿಲ್ಲಾಡಳಿತ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ಧ್ವಜಾರೋಹಣ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ : – ಲೋಕಾಯುಕ್ತ ವ್ಯಾಪ್ತಿಗೆ ಎಸಿಬಿ – ಹೈಕೋರ್ಟ್ ತೀರ್ಮಾನ ಗೌರವಿಸಬೇಕು ಎಂದ ಸಿದ್ದರಾಮಯ್ಯ
ಶಿಷ್ಟಾಚಾರದ ಪ್ರಕಾರ ಆ ಭಾಗದ ಸಂಸದ, ಶಾಸಕರು ಭಾಗವಹಿಸಬಹುದು. ಭಾರತ್ ಮಾತಾಕೀ ಜೈ, ವಂದೇ ಮಾತರಂ ಬಿಟ್ಟರೆ ಬೇರೆ ಯಾವುದೇ ಘೋಷಣೆ ಕೂಗುವಂತಿಲ್ಲ. ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಭಾಗವಹಿಸಬಹುದು ಎಂದು ಹೇಳಿದರು. ಹಿಂದೂ ಸಂಘಟನೆಗಳು ಗಣೇಶೋತ್ಸವ ಆಚರಣೆಗೆ ಅವಕಾಶ ಕೋರಿ ಸಲ್ಲಿಸಿದ್ದ ಮನವಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಶೋಕ್, ಗಣೇಶೋತ್ಸವಕ್ಕೆ ಇನ್ನೂ ಸಮಯ ಇದೆ. ಆಗ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ : – BREAKING NEWS -ಲೋಕಾಯುಕ್ತ ವ್ಯಾಪ್ತಿಗೆ ಎಸಿಬಿ – ಹೈಕೋರ್ಟ್ ಮಹತ್ವದ ಆದೇಶ