ಟೆನ್ನೆಸ್ಸಿ: ಅಮೆರಿಕದ ಟೆನ್ನೆಸ್ಸಿಯಾದ್ಯಂತ ಭಾರಿ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ಪ್ರವಾಹಉಂಟಾಗಿ ಹಲವು ಮನೆ, ಅಪಾರ್ಟ್ಮೆಂಟ್ಗಳಿಗೆ ನೀರು ನುಗ್ಗಿದೆ. ಪ್ರವಾಹದಿಂದ ಮೃತಪಟ್ಟ ನಾಲ್ವರ ಶವಗಳು ಪತ್ತೆಯಾಗಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಹಲವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಶ್ವಿಲ್ಲೆಯಲ್ಲಿನ ರಾಷ್ಟ್ರೀಯ ಹವಾಮಾನ ಸೇವಾ ಸಂಸ್ಥೆಯು ಪ್ರವಾಹಕುರಿತತುರ್ತು ಪರಿಸ್ಥಿತಿ ಘೋಷಿಸಿದೆ.ಕಾರುಗಳು, ಅಪಾರ್ಟ್ಮೆಂಟ್ಗಳು ಮತ್ತು ಮನೆಗಳಿಂದ ಸುಮಾರು 130 ರಕ್ಷಿಸಲಾಗಿದೆ. ಪ್ರವಾಹ ಸಂತ್ರಸ್ತರಿಗೆ ಶಿಬಿರಗಳನ್ನು ತೆರೆಯಲಾಗಿದ್ದು, ಕಾರ್ಯಾಚರಣೆ ಭರದಿಂದ ಸಾಗುತ್ತಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.