ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಶನಿವಾರ ಬೆಳಿಗ್ಗೆ ಟ್ವಿಟರ್ ನಲ್ಲಿ ಈ ವಿಷಯ ದೃಢಪಡಿಸಿರುವ ಕುಮಾರಸ್ವಾಮಿ, ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.
ಉಪ ಚುನಾವಣೆಗಳ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ, ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.