ಬೆಂಗಳೂರು : ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಕೆಲಸವಾಗಿದೆ. ಈ ಅಂಟುರೋಗಕ್ಕೆ ಸಿದ್ದರಾಮಯ್ಯ ಒಳಗಾಗಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ನ ಆತ್ಮವಂಚನೆ ಬಗ್ಗೆ ನಾನು ಹೇಳಿದೆ. ಇದಕ್ಕಾಗಿ ಸಿದ್ದರಾಮಯ್ಯನವರು ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್ ಕೊಡಬೇಕೆನಿಸಿದೆ. ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ ನಿಂತಿರುವುದು ಕಾಂಗ್ರೆಸ್. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್ ವಿಕೆಟ್ ಆಗಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ..? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ..? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ..? ಅದು ಬಿಟ್ಟು ನೀವು ಮಾಡಿದ್ದೇನು..? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ ಮಾಡುವ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ ಮಾಡಿದ್ದೀರಾ ಎಂದು ಕಿಡಿಕಾರಿದ್ದಾರೆ.