ರಾಮನಗರ: ರಾಮನಗರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ಆ್ಯಂಬುಲೆನ್ಸ್ ಗಳನ್ನ ಕೊಡುಗೆ ನೀಡಿದ್ದಾರೆ. ರಾಮನಗರ ತಾಲೂಕಿಗೆ ಆ್ಯಂಬುಲೆನ್ಸ್ ಗಳ ಕೊರತೆ ಇದ್ದ ಕಾರಣ ಹೆಚ್ಡಿಕೆ ಕೊಡುಗೆ ನೀಡಿದ್ದಾರೆ.
ಪುತ್ರ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಆರೋಗ್ಯ ಅಧಿಕಾರಿಗೆ ಆ್ಯಂಬುಲೆನ್ಸ್ ಗಳನ್ನು ಹಸ್ತಾಂತರ ಮಾಡಿದ್ದಾರೆ. ಸ್ವಂತ ಹಣದಿಂದ ಎರಡು ಆ್ಯಂಬುಲೆನ್ಸ್ ಕೊಡುಗೆ ನೀಡಿದ್ದು, ಕೊರೊನಾ ಮುಗಿಯುವವರೆಗೆ ಸಾರ್ವಜನಿಕ ಸೇವೆಗೆ ಲಭ್ಯವಿರಲಿದೆ. ಇನ್ನು ಆ್ಯಂಬುಲೆನ್ಸ್ಗಳ ಸಂಪೂರ್ಣ ಖರ್ಚು ವೆಚ್ಚವನ್ನು ಭರಿಸಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನಿಖಿಲ್ ಕುಮಾರ್, ಈಗಾಗಲೇ ಕೊರೊನಾ ಎರಡನೇ ಅಲೆಯಿಂದ ಸಾಕಷ್ಟು ತೊಂದರೆಯಾಗುತ್ತಿದೆ. ಜಿಲ್ಲೆಯಲ್ಲಿಯೂ ಸಹ ಹಲವಾರು ಜನ ಸಾವನ್ನಪ್ಪಿದ್ದಾರೆ. ಆದರೆ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಆ್ಯಂಬುಲೆನ್ಸ್ ಗಳಿಲ್ಲದೇ ತೊಂದರೆ ಪಡುತ್ತಿದ್ದರು. ಹಾಗಾಗಿ ಕುಮಾರಸ್ವಾಮಿಯವರು ಈ ಸಂದರ್ಭದಲ್ಲಿ ಜನರ ಅನುಕೂಲಕ್ಕಾಗಿ ಎರಡು ಆ್ಯಂಬುಲೆನ್ಸ್ಗಳನ್ನ ನೀಡಿದ್ದಾರೆ ಎಂದು ತಿಳಿಸಿದರು.