ಬೆಂಗಳೂರು : ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದ ರಾಜ್ಯದ ಜನತೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಧನ್ಯವಾದಗಳನ್ನು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ನಾಯಕರು, ಮುಖಂಡರು ಎಲ್ಲಕ್ಕೂ ಮಿಗಿಲಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಭಿನಂದನೆಗಳು.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಹಣದ ಅಬ್ಬರ ನಡುವೆಯೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಗೆಲುವು ಆಗಿದೆ. ನಮ್ಮ ವಿರುದ್ದ ಮಾಡಿದ ಅಪಪ್ರಚಾರ ನಡುವೆಯೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಕೈ ಹಿಡಿದ ಜನತೆ ಗೌರವಯುತ ತೀರ್ಪು ನೀಡಿರುವುದನ್ನು ಗೌರವಿಸುತ್ತೇನೆ ಎಂದು ತಿಳಿಸಿದ್ದಾರೆ.