ಬೆಂಗಳೂರು : ಕೇಂದ್ರ ಸರ್ಕಾರ ಇತ್ತೀಚಿನ ವರ್ಷಗಳಲ್ಲಂತೂ ಹಿಂದಿ ಹೇರಿಕೆಯ ಪ್ರಯತ್ನ ಅತ್ಯಂತ ಪ್ರಬಲವಾಗಿ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು ‘ಒಂದು ದೇಶ ಒಂದು ಭಾಷೆ‘ ಪರಿಕಲ್ಪನೆ ಅಡಿಯಲ್ಲಿ ಹಿಂದಿಯನ್ನು ರಾಷ್ಟ್ರಭಾಷೆ ಮಾಡುವ ಪ್ರಯತ್ನಗಳಾಗುತ್ತಿವೆ. ಕೇಂದ್ರ ಸರ್ಕಾರಗಳೆಲ್ಲವೂ ಅಪಮಾರ್ಗದಲ್ಲಿ ಹಿಂದಿಯನ್ನು ಹೇರಿಕೊಂಡೇ ಬಂದಿವೆ. ಕನ್ನಡವನ್ನು 3ನೇ ದರ್ಜೆ ಭಾಷೆಯಾಗಿ ಕಾಣುತ್ತಾ ಬಂದಿವೆ ಎಂದು ಕುಮಾರಸ್ವಾಮಿ ಟ್ವಿಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರ ಸರ್ಕಾರದ ತ್ರಿಭಾಷಾ ಸೂತ್ರವೆಂಬ ಕುಣಿಕೆಗಳು ಹಿಂದಿ ಹೇರಿಕೆಯ ಸ್ಪಷ್ಟ ಪ್ರಯತ್ನ ನಡೆಯುತ್ತಿದೆ.ಸ್ಥಳೀಯ ಭಾಷೆಗಳನ್ನು ಕೊಲ್ಲುವ ಅಜೆಂಡಾಗಳು. ನಮ್ಮಹೋರಾಟಗಳು ಇಂಥ ಮಾರಕ ಅಜೆಂಡಾಗಳ ವಿರುದ್ಧ ಇರಬೇಕು ಎಂದಿದ್ದಾರೆ.