ಏರೋ​ ಇಂಡಿಯಾ ಕಾರ್ಯಕ್ರಮದಲ್ಲಿ ಕನ್ನಡ ಕಣ್ಮರೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಲಾಗಿತ್ತು. ಈ ಕುರಿತ ಆಕ್ಷೇಪಗಳಿಗೆ ಉತ್ತರಿಸಿದ್ದ ಕೇಂದ್ರ, ಕನ್ನಡ ಕಡ್ಡಾಯವಲ್ಲ ಎಂದಿತ್ತು. ಇದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕಹಿ ನೆನಪು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಕನ್ನಡಕ್ಕೆ ಅಪಚಾರ ಮಾಡಲಾಗಿದೆ. ಇದು ಅತ್ಯಂತ ನೋವಿನ ಸಂಗತಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಕ್ಷಣಾ‌‌‌ ಸಚಿವ ರಾಜನಾಥ್‌ಸಿಂಗ್ ಯಲಹಂಕದ‌ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಆಯೋಜಿಸಿರುವ ಏರೋ ಇಂಡಿಯಾ ಕಾರ್ಯಕ್ರಮ‌ ಉದ್ಘಾಟಿಸಿದ್ದರು. ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದರು. ರಾಜ್ಯದ ಹಲವು ನಾಯಕರೂ ಅಲ್ಲಿದ್ದರು. ಇವರ್ಯಾರಿಗೂ ಕನ್ನಡಕ್ಕಾದ ಅಪಮಾನ ಕಾಣಲಿಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!