ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ ಮಾಜಿ ಸಿಎಂ S.M ಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ( S.M KRISHNA ) ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ( SUDHAKAR ) ಟ್ವೀಟ್ ಮಾಡಿದ್ದಾರೆ. ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಜ್ವರ ಹೆಚ್ಚಾಗಿದ್ದ ಹಿನ್ನೆಲೆ ಸೆಂ.24ರಂದು ರಾತ್ರಿ ಹಳೇ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹಿರಿಯ ಮುಖಂಡರು, ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಎಸ್. ಎಂ. ಕೃಷ್ಣ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ರಾಜಕೀಯ ಹಾಗೂ ಜನಸೇವೆಯಲ್ಲಿ ಅಪಾರ ಅನುಭವ ಹೊಂದಿರುವ ಅವರ ಮಾರ್ಗದರ್ಶನ ಇನ್ನಷ್ಟು ದೀರ್ಘಕಾಲ ನಾಡಿಗೆ ದೊರಕಲಿ ಎಂದು ಆಶಿಸುತ್ತೇನೆ. ಎಂದು ತಿಳಿದು ಬಂದಿದೆ ಎಂದು ಬರೆದುಕೊಂಡಿದ್ದಾರೆ. ಆಸ್ಪತ್ರೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಮಾಜಿ ಸಿಎಂ S.M.ಕೃಷ್ಣ ಆರೋಗ್ಯ ವಿಚಾರಿಸಿದ್ದರು. ಇದೀಗ ಅವರು ಆಸ್ಪತ್ರೆಯಿಂದ ಮನೆಗೆ ಆರೋಗ್ಯವಾಗಿ ಬಂದಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

 ಇದನ್ನೂ ಇದಿ : –  ಮಧ್ಯಾಹ್ನ 2 ಗಂಟೆಗೆ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿ ಪ್ರಕಟ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!