ಕಾಂಗ್ರೆಸ್ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ

ರಾಮನಗರ( ramanagar ) ದಲ್ಲಿ ರಾಜಕೀಯ ಪಕ್ಷಗಳ ನಡುವೆ ಕಿತ್ತಾಟ ಜೋರಾಗುತ್ತಿದೆ.

ರಾಮನಗರ( ramanagar ) ದಲ್ಲಿ ರಾಜಕೀಯ ಪಕ್ಷಗಳ ನಡುವೆ ಕಿತ್ತಾಟ ಜೋರಾಗುತ್ತಿದೆ. ಈಗ ಮತ್ತೆ ಮಾಗಡಿ ತಾಲೂಕಿನ ಕಾಮಸಾಗರ( kamasagara ) ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ( h.c bala krishna ) ಕಾರಿನ ಮೇಲೆ ಕಲ್ಲು ತೂರಿದ್ದಾರೆ.

ಇಂದು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆಗೆ ಮಾಜಿ ಕಾಂಗ್ರೆಸ್ ( congress ) ಶಾಸಕ ಹೆಚ್.ಸಿ.ಬಾಲಕೃಷ್ಣ ಆಗಮಿಸಿದ್ದರು. ಇದಕ್ಕೆ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಇನ್ನೂ ಕಾರ್ಯಕ್ರಮದ ಬ್ಯಾನರ್ ನಲ್ಲಿ ಶಾಸಕ ಮಂಜುನಾಥ್ ಹೆಸರು ಕೊನೆಯಲ್ಲಿ ಹಾಕಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ.  ಇದನ್ನೂ ಓದಿ : –  ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಪೂಜಾ ಭಟ್


ಇದರ ಮಧ್ಯಯೇ ಬಾಲಕೃಷ್ಣ ಕಟ್ಟಡವನ್ನು ಉದ್ಘಾಟಿಸಿ ಕಾರಿನಲ್ಲಿ ವಾಪಸ್ ಆಗುತ್ತಿರುವಾಗ ಕಾರಿನ ಮೇಲೆ ಜೆಡಿಎಸ್ ( jds ) ಕಾರ್ಯಕರ್ತರು ಕಲ್ಲು ತೂರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುದೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಸಿದ್ದಾರೆ .

 ಇದನ್ನೂ ಓದಿ : –  ಪಕ್ಷದಿಂದ ವಲಸೆ ಹೋದವರಿಗೂ ಮುಕ್ತ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!